Cancer Hospital 2
Laxmi Tai add
Beereshwara 33

ಸಂಸ್ಥೆಗೆ ಕರಪ್ಷನ್ ಕಳಂಕ ಮೆತ್ತಿಕೊಂಡಿದ್ದು, ಈ ಹಣೆಪಟ್ಟಿಯಿಂದ ಬಿಡಿಎಯನ್ನು ಹೊರತರಬೇಕು, ಯಾವುದೇ ಡಿ ನೋಟಿಫಿಕೇಶನ್ ಮಾಡುವಂತಿಲ್ಲ – ಡಿ.ಕೆ.ಶಿವಕುಮಾರ

Anvekar 3

*ಬಿಡಿಎ ಅಧಿಕಾರಿಗಳ ಸಭೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾತುಗಳು*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಸಂಸ್ಥೆಗೆ ಕರಪ್ಷನ್ ಕಳಂಕ ಮೆತ್ತುಕೊಂಡಿದ್ದು, ಈ ಹಣೆಪಟ್ಟಿಯಿಂದ ಬಿಡಿಎಯನ್ನು ಹೊರತರಬೇಕು. ಕಾನೂನುಬಾಹಿರ ಚಟುವಟಿಕೆಗಳಿಗೆ ಆಸ್ಪದ ನೀಡಬಾರದು. ಯಾವುದೇ ಡಿ ನೋಟಿಫಿಕೇಶನ್ ಮಾಡುವಂತಿಲ್ಲ ಎಂದು ಉಪಮುಖ್ಯಮಂತ್ರಿಗಳೂ, ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ.ಶಿವಕುಮಾರ ಹೇಳಿದ್ದಾರೆ.

ಬಿಡಿಎ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕೇವಲ ನೋಟಿಫಿಕೇಶನ್ ಹೊರಡಿಸಿದರೆ ಸಾಲದು, ಅದಕ್ಕೆ ತಕ್ಕಂತೆ ಕೆಲಸಗಳನ್ನು ಮಾಡಬೇಕು. ಸಂಚಾರಿ ದಟ್ಟಣೆ ಕಡಿಮೆ ಮಾಡಲು ತುರ್ತು ಕ್ರಮಗಳನ್ನು ಕೈಗೊಳ್ಳಬೇಕು. ಅಗತ್ಯ ಸ್ಥಳಗಳಲ್ಲಿ ರಸ್ತೆ ಅಗಲೀಕರಣ ಮಾಡಬೇಕು.  ಜಮೀನು ಆಸ್ತಿ ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡಬೇಕು ಎಂದರು.

ಸಿಡಿಪಿ ಕೈಗೊಂಡ ಪ್ರಮುಖ ನಿರ್ಣಯಗಳನ್ನು ಶೀಘ್ರವಾಗಿ ಅನುಷ್ಠಾನಕ್ಕೆ ತರಬೇಕು. ಅನೇಕ ದಿನಗಳಿಂದ ನನೆಗುದಿಗೆ ಬಿದ್ದಿರುವ ಯೋಜನೆಗಳನ್ನು ಕೂಡಲೇ ಕೈಗೆತ್ತಿಕೊಳ್ಳಬೇಕು. 73.40 ಕಿ.ಮೀ ಉದ್ದದ ಪೆರಿಫೆರಲ್ ರಿಂಗ್ ರಸ್ತೆ ಯೋಜನೆಯನ್ನು ಶೀಘ್ರವೇ ಅನುಷ್ಠಾನಕ್ಕೆ ತರಬೇಕು ಎಂದು ಸೂಚಿಸಿದರು.

Emergency Service

ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಶಿವಕುಮಾರ, ಬೆಂಗಳೂರಿನ ಅಭಿವೃದ್ಧಿಗೆ ಯಾವೆಲ್ಲ ಬದಲಾವಣೆಗಳನ್ನು ತರಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದ್ದೇವೆ. ಭ್ರಷ್ಟಾಚಾರ ನಿಲ್ಲಬೇಕು. ಇದನ್ನು ನಾವು ಸಹಿಸಿಕೊಂಡಿರಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದೇವೆ.

ಬಿಡಿಎನಲ್ಲಿ ದೊಡ್ಡಮಟ್ಟದ ಅಭಿವೃದ್ಧಿ ಚಟುವಟಿಕೆಗಳು ನಡೆಯುತ್ತಿಲ್ಲ. ಹೀಗಾಗಿ ಅವರಿಗೆ ಕೆಲಸ ನೀಡುವ ಅಗತ್ಯವಿದೆ. ಹೀಗಾಗಿ ಅವರಿಗೆ ಸೂಕ್ತ ನಿರ್ದೇಶನ ನೀಡಲಾಗಿದೆ. ಸಂಚಾರ ದಟ್ಟಣೆ ನಿಯಂತ್ರಣಕ್ಕೆ  ಚರ್ಚೆ ಮಾಡಿದ್ದೇವೆ. ಅವರ ಸಲಹೆಗಳನ್ನು ಸಂಗ್ರಹಿಸಿದ್ದು, ಸಾರ್ವಜನಿಕ ಅಭಿಪ್ರಾಯ ಪಡೆಯುತ್ತೇವೆ. ಇನ್ನು ಗುತ್ತಿಗೆದಾರರ ಸಂಘದ ಜತೆ ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳ ಸಭೆ ಇದೆ. ಎಷ್ಟು ಪ್ರಾಮಾಣಿಕವಾಗಿ ಕೆಲಸ ಮಾಡಲು ಸಾಧ್ಯವೋ ಅಷ್ಟು ಮಾಡಲು ಸಿದ್ಧ ಎಂದರು.

https://pragati.taskdun.com/implementation-of-guaranteed-schemes-as-promised-dcm-d-k-shivakumar/
Gokak Jyotishi add 8-2
Bottom Add3
Bottom Ad 2