

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಭಾರತ ಚುನಾವಣಾ ಆಯೋಗದಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಕೊಡಲಾಗುವ ‘ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ’ ಪ್ರಶಸ್ತಿ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರನ್ನು ಆಯ್ಕೆ ಮಾಡಲಾಗಿದೆ.
ಭಾರತ ಚುನಾವಣಾ ಆಯೋಗ ಮತ್ತು ಮುಖ್ಯ ಚುನಾವಣಾಧಿಕಾರಿಗಳ ಕರ್ನಾಟಕ ಕಚೇರಿಯಿಂದ ಪ್ರಶಸ್ತಿ ಪ್ರಕಟಿಸಲಾಗಿದೆ. ಮತದಾರರ ನೋಂದಣಿ, ಪರಿಷ್ಕರಣೆ ಸೇರಿದಂತೆ ಸಮಗ್ರವಾಗಿ ಚುನಾವಣಾ ಕಾರ್ಯವನ್ನು ಅತ್ಯುತ್ತಮವಾಗಿ ನಿರ್ವಹಿಸಿರುವುದನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.
ನಾಳೆ (ಜ.25) ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್ ನಲ್ಲಿ ನಡೆಯಲಿರುವ ರಾಷ್ಟ್ರೀಯ ಮತದಾರರ ದಿನಾಚರಣೆ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜಕುಮಾರ್ ಮೀನಾ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಹಾಜರಿರುವರು.
ಇದೇ ರೀತಿ ತುಮಕೂರು, ಯಾದಗಿರಿ ಮತ್ತು ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೂ ಪ್ರಶಸ್ತಿ ನೀಡಲಾಗುತ್ತಿದೆ. ಇದಲ್ಲದೇ ವಿವಿಧ ಜಿಲ್ಲೆಗಳ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ನೋಂದಣಾಧಿಕಾರಿಗಳು, ಬೂತ್ ಮಟ್ಟದ ಅಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಚುನಾವಣಾ ಶಾಖೆಯ ತಾಂತ್ರಿಕ ಸಿಬ್ಬಂದಿಗೂ ಪ್ರತ್ಯೇಕ ವಿಭಾಗಗಳಲ್ಲಿ ವಿವಿಧ ಪ್ರಶಸ್ತಿಗಳನ್ನು ಘೋಷಿಸಲಾಗಿದೆ.
ಪದವಿ ಪ್ರದಾನದ ವೇಳೆ ಅರಳಿತು ಕನ್ನಡ ಧ್ವಜ

ಫುಟ್‌ಬಾಲ್ ನಲ್ಲಿ ತೋರಿಸಲಾಯಿತು ಮೊದಲ ವ್ಹೈಟ್ ಕಾರ್ಡ್
ಜೋಶಿಮಠದಲ್ಲಿ ಮೊದಲ ವಸತಿ ಕಟ್ಟಡ ಕುಸಿತ